ಅಭಿಪ್ರಾಯ / ಸಲಹೆಗಳು

ಅಲೆಮಾರಿ ಅರೆ ಅಲೆಮಾರಿ ಜನಾಂಗದವರಿಗೆ ವಿದ್ಯಾರ್ಥಿವೇತನ

ಮೆಟ್ರಿಕ್ ಪೂರ್ವ ವಿಶೇಷ ಪ್ರೋತ್ಸಾಹಧನ:
ಮೆಟ್ರಿಕ್ ಪೂರ್ವ ವಿಶೇಷ ಪ್ರೋತ್ಸಾಹಧನ
(2016-17ನೇ ಸಾಲಿನ ಆಯವ್ಯಯ ರೂ.300.00 ಲಕ್ಷ)
ಅಲೆಮಾರಿ ಹಾಗೂ ಅರೆ ಅಲೆಮಾರಿ ಜನಾಂಗಕ್ಕೆ ಸೇರಿದ ವಿದ್ಯಾರ್ಥಿಗಳ ಮಾಧ್ಯಮಿಕ ಹಾಗೂ ಪ್ರೌಢ ಶಿಕ್ಷಣಕ್ಕೆ ಆರ್ಥಿಕ ನೆರವು
ನೀಡುವುದರ ಮೂಲಕ ಮಧ್ಯದಲ್ಲಿ ಶಾಲೆ ಬಿಡುವವರ ಪ್ರಮಾಣವನ್ನು ಕಡಿಮೆ ಮಾಡಲು ಹಾಗೂ ಈ ಹಂತದ ಶಿಕ್ಷಣ ಮುಂದುವರಿಕೆಯ
ಉದ್ದೇಶದಿಂದ, ಸರ್ಕಾರಿ ಅಥವಾ ಸರ್ಕಾರದಿಂದ ಮಾನ್ಯತೆ ಪಡೆದ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ
ಈ ಕೆಳಕಾಣಿಸಿದ ದರಗಳಲ್ಲಿ ಪ್ರೋತ್ಸಾಹಧನ ಮಂಜೂರು ಮಾಡಲಾಗುತ್ತಿದೆ.
ಕ್ರ. ಸಂ ತರಗತಿ
ಮಾಹೆಯಾನ ಪ್ರೋತ್ಸಾಹ ಧನ ದರಗಳು
ಬಾಲಕರು ಬಾಲಕಿಯರು
ಅವಧಿ
1 5 ರಿಂದ 7ನೇ ತರಗತಿ ವಿದ್ಯಾರ್ಥಿಗಳಿಗೆ ರೂ.100/- ರೂ.150/- 10 ತಿಂಗಳು
2 8 ರಿಂದ 10ನೇ ತರಗತಿ ರೂ.150/- ರೂ.200/- 10 ತಿಂಗಳು
ಅರ್ಹತೆಗಳು:
1.ಹಿಂದುಳಿದ ವರ್ಗಗಳ ಅಲೆಮಾರಿ ಹಾಗೂ ಅರೆಅಲೆಮಾರಿ ಪಂಗಡಕ್ಕೆ ಸೇರಿದ ವಿದ್ಯಾರ್ಥಿಯಾಗಿರಬೇಕು.
2.ವಿದ್ಯಾರ್ಥಿಯ, ಅವರ ತಂದೆ-ತಾಯಿ ಪಾಲಕರು/ಪೋಷಕರ ವಾರ್ಷಿಕ ಆದಾಯ ರೂ.2.00 ಲಕ್ಷ ಮಿತಿಯೊಳಗಿರಬೇಕು.
3.ವಿದ್ಯಾರ್ಥಿಯು, 5 ರಿಂದ 10ನೇ ತರಗತಿವರೆಗೆ, ಸರ್ಕಾರಿ ಅಥವಾ ಸರ್ಕಾರದಿಂದ ಮಾನ್ಯತೆ ಪಡೆದ
ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ವ್ಯಾಸಂಗ ಮಾಡುತ್ತಿರಬೇಕು.
4.ಈ ಯೋಜನೆಯಡಿ ಅರ್ಜಿ ಸಲ್ಲಿಸಲು ವಿದ್ಯಾರ್ಥಿ ಹಿಂದಿನ ತರಗತಿಯ ವಾರ್ಷಿಕ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
5.ವಿದ್ಯಾರ್ಥಿಯು ಸರ್ಕಾರದ ಇನ್ನಾವುದೇ ಯೋಜನೆಯಿಂದ ವಿದ್ಯಾರ್ಥಿವೇತನ ಅಥವಾ ವಸತಿ ನಿಲಯ ಸೌಲಭ್ಯವನ್ನು
ಪಡೆದಿರಬಾರದು.
6.ಈ ಪ್ರೋತ್ಸಾಹಧನವನ್ನು ನವೀಕರಿಸಲು ವಿದ್ಯಾರ್ಥಿಯು ಹಿಂದಿನ ತರಗತಿಯ ವಾರ್ಷಿಕ ಪರೀಕ್ಷೆಯಲ್ಲಿ ಎಲ್ಲಾ
ವಿಷಯಗಳಲ್ಲಿ ಉತ್ತೀರ್ಣರಾಗಿರಬೇಕು.
ಆಯ್ಕೆ ವಿಧಾನ:
1.ಅರ್ಹ ಮಾಧ್ಯಮಿಕ ಹಾಗೂ ಪ್ರೌಢಶಾಲಾ ಅಲೆಮಾರಿ/ ಅರೆಅಲೆಮಾರಿ ಜನಾಂಗದ ವಿದ್ಯಾರ್ಥಿಗಳ ಪಟ್ಟಿಯನ್ನು ಡಿಬಿಟಿ
ಶಾಖೆಯ ಮೂಲಕ ಪಡೆದು ಅನುದಾನ ಮಂಜೂರಾತಿಗೆ ಕ್ರಮವಹಿಸಲಾಗುವುದು.
2.ಅನುದಾನ ಲಭ್ಯತೆ ಆಧಾರದಲ್ಲಿ ಅರ್ಜಿ ಸಲ್ಲಿಸುವ ಎಲ್ಲಾ ಅರ್ಹ ಹೊಸ ಮತ್ತು ನವೀಕರಣ ವಿದ್ಯಾರ್ಥಿಗಳೆಲ್ಲರಿಗೂ ವಿದ್ಯಾರ್ಥಿ
ವೇತನವನ್ನು ನೀಡಲು ಕ್ರಮವಹಿಸಲಾಗುವುದು.
3.ರಾಜ್ಯವಲಯದಿಂದ ಜಿಲ್ಲಾ ಪಂಚಾಯತ್‍ಗೆ ಬಿಡುಗಡೆ ಮಾಡುವ ಅನುದಾನವನ್ನು ಅರ್ಹ ವಿದ್ಯಾರ್ಥಿಗಳ ಪಟ್ಟಿಯನ್ನಾಧರಿಸಿ,
ಸಂಬಂಧಪಟ್ಟ ತಾಲ್ಲೂಕಿಗೆ ಜಿಲ್ಲಾಮಟ್ಟದಲ್ಲಿ ಮರು ಬಿಡುಗಡೆ ಮಾಡಲಾಗುತ್ತದೆ.
4.ಅರ್ಹ ವಿದ್ಯಾರ್ಥಿಗಳಿಗೆ ತಾಲ್ಲೂಕು ಹಂತದಲ್ಲಿ ವಿದ್ಯಾರ್ಥಿವೇತನವನ್ನು ಮಂಜೂರು ಮಾಡುವುದು.
ಮೆಟ್ರಿಕ್ ನಂತರ ವಿದ್ಯಾರ್ಥಿಗಳಿಗೆ ಅರ್ಹತಾ ವಿದ್ಯಾರ್ಥಿ ವೇತನ:
ಮೆಟ್ರಿಕ್ ನಂತರ ವಿದ್ಯಾರ್ಥಿಗಳಿಗೆ ಅರ್ಹತಾ ವಿದ್ಯಾರ್ಥಿ ವೇತನ
(2016-17ನೇ ಸಾಲಿನ ಆಯವ್ಯಯ ರೂ.400.00 ಲಕ್ಷ)
ಅಲೆಮಾರಿ/ ಅರೆಅಲೆಮಾರಿ ಪಂಗಡಕ್ಕೆ ಸೇರಿದ ವಿದ್ಯಾರ್ಥಿಗಳ ಮೆಟ್ರಿಕ್ ನಂತರದ ಶಿಕ್ಷಣವನ್ನು ಮುಂದುವರೆಸಲು ಹಾಗೂ ಈ ಹಂತದ ವಿದ್ಯಾರ್ಥಿಗಳಿಗೆ
ಶಿಕ್ಷಣದಲ್ಲಿ ಉತ್ತೇಜನ ನೀಡುವ ಉದ್ದೇಶದಿಂದ ಸರ್ಕಾರಿ ಅಥವಾ ಸರ್ಕಾರದಿಂದ ಮಾನ್ಯತೆ ಪಡೆದ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ವಿಶ್ವವಿದ್ಯಾಲಯದಿಂದ
ಅಂಗೀಕೃತವಾದ ಕೋರ್ಸಿನಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ಅವರು ಹಿಂದಿನ ತರಗತಿಯ ವಾರ್ಷಿಕ ಪರೀಕ್ಷೆಯಲ್ಲಿ ಗಳಿಸಿರುವ ಅಂಕಗಳ ಅರ್ಹತೆಯ
ಆಧಾರದ ಮೇಲೆ ಈ ಕೆಳಕಾಣಿಸಿದ ದರಗಳಲ್ಲಿ ಅರ್ಹತಾ ವಿದ್ಯಾರ್ಥಿವೇತನವನ್ನು ಮಂಜೂರು ಮಾಡಲಾಗುವುದು.
ಮೆಟ್ರಿಕ್ ನಂತರದ ಶಿಕ್ಷಣ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುವ ಅಲೆಮಾರಿ ಮತ್ತು ಅರೆಅಲೆಮಾರಿ ಜನಾಂಗದ ಕಾಲೇಜು ವಿದ್ಯಾರ್ಥಿಗಳಿಗೆ ಅರ್ಹತಾ ವಿದ್ಯಾರ್ಥಿ
ವೇತನವನ್ನು ಈ ಕೆಳಕಾಣಿಸಿದ ದರಗಳಲ್ಲಿ ಮಂಜೂರು ಮಾಡಲಾಗುತ್ತಿದೆ.
ಕ್ರ. ಸಂ ವಿವರ ಮಾಸಿಕ ವಿದ್ಯಾರ್ಥಿವೇತನದ ದರ ಅವಧಿ
1 ಪಿ.ಯು.ಸಿ ಮತ್ತು ಡಿಪ್ಲೊಮಾ 300/- 10 ತಿಂಗಳಿಗೆ
2 ಪದವಿ ಮತ್ತು ಸ್ನಾತಕೋತ್ತರ ಪದವಿ 400/- 10 ತಿಂಗಳಿಗೆ
3 ಸಿಇಟಿ ಮೂಲಕ ಸರ್ಕಾರಿ ಕೋಟಾದಲ್ಲಿ ಬಿಇ, ಎಂ.ಬಿ.ಬಿ.ಎಸ್., ಬಿ.ಡಿ.ಎಸ್.,
ತತ್ಸಮಾನವಾದ ಇನ್ನಿತರ ತಾಂತ್ರಿಕ/ವೃತ್ತಿಪರ ಕೋರ್ಸುಗಳಿಗೆ
500/- 10 ತಿಂಗಳಿಗೆ
ಅ) ಅರ್ಹತೆ :
1.ಹಿಂದುಳಿದ ವರ್ಗಗಳ ಅಲೆಮಾರಿ ಹಾಗೂ ಅರೆಅಲೆಮಾರಿ ಪಂಗಡಗಳಿಗೆ ಸೇರಿರಬೇಕು.
2.ಅಭ್ಯರ್ಥಿಯು ಈ ಯೋಜನೆಯ ಸೌಲಭ್ಯಕ್ಕೆ ಪ್ರಥಮವಾಗಿ ಅರ್ಜಿ ಸಲ್ಲಿಸಲು ಹಿಂದಿನ ತರಗತಿಯ
ವಾರ್ಷಿಕ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
3.ಈ ಅರ್ಹತಾ ವಿದ್ಯಾರ್ಥಿ ವೇತನದ ನವೀಕರಣಕ್ಕೆ ವಿದ್ಯಾರ್ಥಿಯು ಹಿಂದಿನ ತರಗತಿ ಪರೀಕ್ಷೆಯ
ಎಲ್ಲಾ ವಿಷಯಗಳಲ್ಲಿ ಉತ್ತೀರ್ಣರಾಗಿರಬೇಕು.
4.ವಿದ್ಯಾರ್ಥಿಯು ಪೋಷಕರ/ಪಾಲಕರ ಕುಟುಂಬದ ವಾರ್ಷಿಕ ಆದಾಯ ರೂ.2.50 ಲಕ್ಷಗಳಿಗಿಂತ ಮೀರಿರಬಾರದು.
5.ವಿದ್ಯಾರ್ಥಿಯು ಸರ್ಕಾರದಿಂದ/ವಿಶ್ವ ವಿದ್ಯಾಲಯದಿಂದ ಇನ್ಯಾವುದೇ ವಿದ್ಯಾರ್ಥಿವೇತನ ಅಥವಾ ಉಚಿತ
ವಿದ್ಯಾರ್ಥಿನಿಲಯ ಸೌಲಭ್ಯ ಪಡೆದಿರಬಾರದು.
ಆಯ್ಕೆ ವಿಧಾನ:
1.ಮೆಟ್ರಿಕ್ ನಂತರದ ಅರ್ಹತಾ ಪ್ರೋತ್ಸಾಹಧನ ಮಂಜೂರಾತಿಗಾಗಿ ಆನ್‍ಲೈನ್ ಮೂಲಕ ಆಹ್ವಾನಿಸುವ ಅರ್ಜಿಗಳಲ್ಲಿ ಅರ್ಹ ಅಲೆಮಾರಿ
ಹಾಗೂ ಅರೆಅಲೆಮಾರಿ ಜನಾಂಗದ ಮೆಟ್ರಿಕ್ ನಂತರದ ವಿದ್ಯಾರ್ಥಿಗಳ ಪಟ್ಟಿಯನ್ನು ಡಿಬಿಟಿ ಶಾಖೆಯ ಮೂಲಕ ಪಡೆದು ಅನುದಾನ
ಮಂಜೂರಾತಿಗೆ ಕ್ರಮವಹಿಸಲಾಗುವುದು.
2.ಅನುದಾನ ಲಭ್ಯತೆ ಆಧಾರದಲ್ಲಿ ಅರ್ಜಿ ಸಲ್ಲಿಸುವ ಎಲ್ಲಾ ಅರ್ಹ ಹೊಸ ಮತ್ತು ನವೀಕರಣ ವಿದ್ಯಾರ್ಥಿಗಳೆಲ್ಲರಿಗೂ ವಿದ್ಯಾರ್ಥಿ
ವೇತನವನ್ನು ನೀಡಲು ಕ್ರಮವಹಿಸಲಾಗುವುದು.
3.ರಾಜ್ಯವಲಯದಿಂದ ಜಿಲ್ಲಾ ಪಂಚಾಯತ್‍ಗೆ ಬಿಡುಗಡೆ ಮಾಡುವ ಅನುದಾನವನ್ನು ಅರ್ಹ ವಿದ್ಯಾರ್ಥಿಗಳ ಪಟ್ಟಿಯನ್ನಾಧರಿಸಿ,
ಸಂಬಂಧಪಟ್ಟ ತಾಲ್ಲೂಕಿಗೆ ಜಿಲ್ಲಾಮಟ್ಟದಲ್ಲಿ ಮರು ಬಿಡುಗಡೆ ಮಾಡಲಾಗುತ್ತದೆ.
4.ಅರ್ಹ ವಿದ್ಯಾರ್ಥಿಗಳಿಗೆ ತಾಲ್ಲೂಕು ಹಂತದಲ್ಲಿ ವಿದ್ಯಾರ್ಥಿವೇತನವನ್ನು ಮಂಜೂರು ಮಾಡಲಾಗುವುದು.
ಆಶ್ರಮ ಶಾಲೆಗಳ ಪ್ರಾರಂಭ ಹಾಗೂ ನಿರ್ವಹಣೆ:
ಮೆಟ್ರಿಕ್ ನಂತರ ವಿದ್ಯಾರ್ಥಿಗಳಿಗೆ ಅರ್ಹತಾ ವಿದ್ಯಾರ್ಥಿ ವೇತನ
(2016-17ನೇ ಸಾಲಿನ ಆಯವ್ಯಯ ರೂ.400.00 ಲಕ್ಷ)
ಅಲೆಮಾರಿ/ ಅರೆಅಲೆಮಾರಿ ಪಂಗಡಕ್ಕೆ ಸೇರಿದ ವಿದ್ಯಾರ್ಥಿಗಳ ಮೆಟ್ರಿಕ್ ನಂತರದ ಶಿಕ್ಷಣವನ್ನು ಮುಂದುವರೆಸಲು ಹಾಗೂ ಈ ಹಂತದ ವಿದ್ಯಾರ್ಥಿಗಳಿಗೆ
ಶಿಕ್ಷಣದಲ್ಲಿ ಉತ್ತೇಜನ ನೀಡುವ ಉದ್ದೇಶದಿಂದ ಸರ್ಕಾರಿ ಅಥವಾ ಸರ್ಕಾರದಿಂದ ಮಾನ್ಯತೆ ಪಡೆದ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ವಿಶ್ವವಿದ್ಯಾಲಯದಿಂದ
ಅಂಗೀಕೃತವಾದ ಕೋರ್ಸಿನಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ಅವರು ಹಿಂದಿನ ತರಗತಿಯ ವಾರ್ಷಿಕ ಪರೀಕ್ಷೆಯಲ್ಲಿ ಗಳಿಸಿರುವ ಅಂಕಗಳ ಅರ್ಹತೆಯ
ಆಧಾರದ ಮೇಲೆ ಈ ಕೆಳಕಾಣಿಸಿದ ದರಗಳಲ್ಲಿ ಅರ್ಹತಾ ವಿದ್ಯಾರ್ಥಿವೇತನವನ್ನು ಮಂಜೂರು ಮಾಡಲಾಗುವುದು.
ಅ) ಅರ್ಹತೆ :
1.ಹಿಂದುಳಿದ ವರ್ಗಗಳ ಅಲೆಮಾರಿ ಹಾಗೂ ಅರೆ ಅಲೆಮಾರಿ ಪಂಗಡಗಳಿಗೆ ಸೇರಿರಬೇಕು.
2.1ನೇ ತರಗತಿಗೆ ಪ್ರವೇಶ ಪಡೆಯುವ ಮಕ್ಕಳ ವಯಸ್ಸು ಸಾರ್ವಜನಿಕ ಶಿಕ್ಷಣ ಇಲಾಖೆಯು
ಪ್ರಾಥಮಿಕ ಶಾಲೆಯ ಪ್ರವೇಶಕ್ಕೆ ನಿಗದಿಪಡಿಸಿರುವ ಕನಿಷ್ಠ ವಯೋಮಿತಿ ಉಳ್ಳವರಾಗಿರತಕ್ಕದ್ದು.
3.ಈ ಆಶ್ರಮಶಾಲೆಗಳಲ್ಲಿ ಶೇ.75 ಭಾಗ ಅಲೆಮಾರಿ ಹಾಗೂ ಅರೆಅಲೆಮಾರಿ ಜನಾಂಗದ
ಮಕ್ಕಳಿಗೆ ಕಡ್ಡಾಯವಾಗಿ ಮೀಸಲಿಡಲಾಗಿರುತ್ತದೆ. ಉಳಿದ ಶೇಕಡ 25ರಷ್ಟು ಸ್ಥಾನಗಳನ್ನು
ಪ್ರವರ್ಗ-1, 2ಎ, 2ಬಿ, 3ಎ ಮತ್ತು 3ಎ ಹಾಗೂ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ
ಮಕ್ಕಳಿಗೆ ಕಾಯ್ದಿರಿಸಲಾಗಿರುತ್ತದೆ.
ಸರ್ಕಾರದ ಆದೇಶ ಸಂಖ್ಯೆ ಸಕಇ 221 ಬಿಎಂಎಸ್ 2009, ದಿ:24.07.2009ರಲ್ಲಿ ರಚಿಸಿರುವ ಈ ಕೆಳಕಂಡ ತಾಲ್ಲೂಕು ಮಟ್ಟದ ಆಯ್ಕೆ
ಸಮಿತಿಯಲ್ಲಿ ಈ ಆಶ್ರಮ ಶಾಲೆಗಳಿಗೆ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲು ತಾಲ್ಲೂಕು ಮಟ್ಟದಲ್ಲಿ ಕ್ರಮವಹಿಸಲಾಗುತ್ತದೆ.
1 ತಾಲ್ಲೂಕಿನ ಹೆಚ್ಚಿನ ಭಾಗ ಪ್ರತಿನಿಧಿಸುವ ವಿಧಾನ ಸಭಾ ಸದಸ್ಯರು ಅಧ್ಯಕ್ಷರು
2 ತಾಲ್ಲೂಕಿನ ಉಳಿದ ಭಾಗ ಪ್ರತಿನಿಧಿಸುವ ವಿಧಾನ ಸಭಾ ಸದಸ್ಯರು ಸದಸ್ಯರು
3 ಆಯಾ ಕ್ಷೇತ್ರದ ವಿಧಾನ ಪರಿಷತ್ತಿನ ಸದಸ್ಯರು ಸದಸ್ಯರು
4 ಸಂಬಂಧ ಪಟ್ಟ ತಾಲ್ಲೂಕ್ ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳು ಸದಸ್ಯರು
5 ಕ್ಷೇತ್ರ ಶಿಕ್ಷಣಾಧಿಕಾರಿಗಳು (ಬಿ.ಇ.ಓ) ಸದಸ್ಯರು
6 ಆಯಾ ತಾಲ್ಲೂಕಿನ ತಹಶೀಲ್ದಾರರು ಸದಸ್ಯರು
7 ಆಯಾ ತಾಲ್ಲೂಕಿನ ಸ್ಥಳೀಯ ಸರ್ಕಾರಿ ಆಸ್ಪತ್ರೆಯ ವೈದ್ಯಾಧಿಕಾರಿಗಳು ಸದಸ್ಯರು
8 ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಆಯಾ ತಾಲ್ಲೂಕಿನ ವಿಸ್ತರಣಾಧಿಕಾರಿಗಳು ಸದಸ್ಯ ಕಾರ್ಯದರ್ಶಿ
ವೇಳಾಪಟ್ಟಿ
1 ನವೀಕರಣ ವಿದ್ಯಾರ್ಥಿಗಳಿಗೆ ಪ್ರವೇಶ ನೀಡುವ ದಿನಾಂಕ ಜೂನ್ 1
2 ಹೊಸ ವಿದ್ಯಾರ್ಥಿಗಳ ಪ್ರವೇಶಕ್ಕೆ ಪ್ರಕಟಣೆ ನೀಡುವ ದಿನಾಂಕ ಮೇ 25
3 ಹೊಸ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜೂನ್ 15
4 ಹೊಸ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲು ಕಡೆಯ ದಿನಾಂಕ ಜೂನ್ 20 ರಿಂದ 25
5 ಪ್ರವೇಶಕ್ಕೆ ನಿಗದಿಪಡಿಸಿದ ಕೊನೆಯ ದಿನಾಂಕ ಜೂನ್ 30

ಇತ್ತೀಚಿನ ನವೀಕರಣ​ : 01-04-2021 03:25 PM ಅನುಮೋದಕರು: Admin



ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕರ್ನಾಟಕ ಸರ್ಕಾರದ ಸಚಿವಾಲಯ ಹಿಂದುಳಿದ ವರ್ಗಳ ಕಲ್ಯಾಣ ಇಲಾಖೆ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080